ಕಾರಿಗೆ ಸರ್ಕಾರಿ ಬಸ್ ಡಿಕ್ಕಿ: ತಾಯಿ ಮಗ ಸ್ಥಳದಲ್ಲೇ ಸಾವು. ಚಿಕ್ಕಮಗಳೂರು, ಆಗಸ್ಟ್​ 12,2023(..):ಕಾರಿಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿ ತೆರಳುತ್ತಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಪೂಜಾ ಹಿರೇಮಠ್, ರಾಜಶೇಖರ ಹಿರೇಮಠ್ ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡ ಶಿವಯಾಗಯ್ಯ ಎಂಬುವವರನ್ನ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ತಾಯಿ ಮಗ ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದು, ಸಕಲೇಶಪುರದಿಂದ ಮೂಡಿಗೆರೆ ಕಡೆ ಕೆಎಸ್​ಆರ್​ಟಿಸಿ ಬಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : – -- – - - .