ಇಂದು ಹಾವೇರಿ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಆಗಸ್ಟ್,30,2024 (..):ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ . ಈ ಅರ್ಜಿ ವಿಚಾರಣೆ ಈಗಾಗಲೇ ನಾಳೆಗೆ ಮುಂದೂಡಿಕೆಯಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಇಂದು ಹಾವೇರಿಗೆ ಭೇಟಿ ನೀಡಲಿದ್ದು ವಿವಿಧ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗೆಯೇ ದೇವರಗುಡ್ಡಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ, ದೇವರಗುಡ್ಡಕ್ಕೆ ಭೇಟಿ ನೀಡಿ ಮಾಲತೇಶಸ್ವಾಮಿ ದರ್ಶನ ಪಡೆಯಲಿದ್ದಾರೆ. : , , ,