ನಿರ್ಮಾಪಕ ಚಂದ್ರಶೇಖರ್ ಮನೆಯಲ್ಲಿ ಕಳ್ಳತನ: ನಗದು ಚಿನ್ನಾಭರಣ ದೋಚಿದ ಖದೀಮರು. ಮಂಡ್ಯ,ಆಗಸ್ಟ್,10,2023(..):ಖದೀಮರು ನಿರ್ಮಾಪಕ ಚಂದ್ರಶೇಖರ್ ಅವರ ಮನೆಯ ಬಾಗಿಲು ಮುರಿದು ನಗದು ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಮಂಡ್ಯ ತಾಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ನಿರ್ಮಾಪಕ ಚಂದ್ರಶೇಖರ್ ಮನೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ 3 ಲಕ್ಷ ನಗದು, 35 ಗ್ರಾಂ ಚಿನ್ನ ದೋಚಿ ಖದೀಮರು ಪರಾರಿಯಾಗಿದ್ದಾರೆ. ನಿರ್ಮಾಪಕ ಚಂದ್ರಶೇಖರ್ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸ್ಥಳಕ್ಕೆ‌ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - - – –