ಡಿಕೆ ಶಿವಕುಮಾರ್ ತಮ್ಮ ಜೇಬು ತುಂಬಿಸಿ, ಕಾಂಗ್ರೆಸ್‌ ನವರ ಜೇಬನ್ನೂ ತುಂಬುತ್ತಿದ್ದಾರೆ- ಶಾಸಕ ವಿಜಯೇಂದ್ರ. ಬೆಂಗಳೂರು,ಆಗಸ್ಟ್,10,2023(..):ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಿವೈ ವಿಜಯೇಂದ್ರ, ಗುತ್ತಿಗೆದಾರರು 3-4 ಸಚಿವರ ಮೇಲೆ ಕಮಿಷನ್ ಆರೋಪ ಮಾಡ್ತಿದ್ದಾರೆ. ಗ್ಯಾರಂಟಿ ಹೆಸರೇಳಿ ಜನರ ಕಿವಿಗೆ ಹೂವಿಟ್ಟು ಅಧಿಕಾರಕ್ಕೆ ಬಂದರು. ಈಗ ರಾಜ್ಯ ಜನರಿಗೆ ಮೋಸ ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದ ಜನತೆ ಈ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ಇನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಯಾರೇ ಲಂಚ ಕೇಳಿದ್ರೂ ನನ್ನ ಗಮನಕ್ಕೆ ತನ್ನಿ ಎಂದು ಹೇಳಿದ್ದರು. ಡಿಕೆ ಶಿವಕುಮಾರ್ ಗಮನಕ್ಕೆ ತಂದರೆ ಯಾವ ಪರಿಸ್ಥಿತಿ ಬರುತ್ತೆ ಅಂತಾ ಅರ್ಥವಾಗಿದೆ. ತಮ್ಮ ಜೇಬು ತುಂಬಿಸಿ, ಕಾಂಗ್ರೆಸ್‌ ನವರ ಜೇಬನ್ನೂ ತುಂಬುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ ಹರಿಹಾಯ್ದರು. : – – – -’ - - .