ಇದೊಂದು ಫೇಕ್ ಲೆಟರ್ : ತನಿಖೆಗೆ ಸೂಚಿಸುತ್ತೇನೆ- ಕೃಷಿ ಸಚಿವ ಚಲುವರಾಯಸ್ವಾಮಿ. ಬೆಂಗಳೂರು,ಆಗಸ್ಟ್,7,2023(..):ತಮ್ಮ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪ ಮಾಡಿ ರಾಜ್ಯಪಾಲರಿಗೆ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ನನಗೆ ಗೊತ್ತಿಲ್ಲ. ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್​ ಲೆಟರ್​​ ಎಂಬ ಮಾಹಿತಿ ನೀಡಿದ್ದಾರೆ. ಪಾಪ ಬಹಳ ಹುಡುಕಿ ಹುಡುಕಿ ಏನೇನೋ ಮಾಡುತ್ತಿದ್ದಾರೆ. ಹಾಗೇನಾದರೂ ಆಗಿದ್ದರೇ ತನಿಖೆ ನಡೆಸಲು ಸೂಚಿಸುತ್ತೇನೆ. ನಮ್ಮ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡುವೆ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. : - – - -