ಊರಿಗೆ ಹೋಗಲು ನಿಂತಿದ್ದ ವೇಳೆ ಕಾರುಡಿಕ್ಕಿಯಾಗಿ ಇಬ್ಬರು ಸಾವು. ಹಾವೇರಿ,ಆಗಸ್ಟ್,7,2023(..):ಊರಿಗೆ ಹೋಗಲು ನಿಂತಿದ್ದ ವೇಳೆ ಕಾರುಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ನೀರಲಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅದೇ ಗ್ರಾಮದ ವಿರೂಪಾಕ್ಷಪ್ಪ ಕಾಳಿ ಮತ್ತು ಚಿದಾನಂದ ಮೃತಪಟ್ಟವರು. ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಘಟನೆ ಖಂಡಿಸಿ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – -