ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ದಿನೇಶ್ ಗುಂಡೂರಾವ್ ಸಂತಾಪ. ಬೆಂಗಳೂರು,ಆಗಸ್ಟ್,7,2023(..):ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕನ್ನಡದ ಖ್ಯಾತ ನಟ ವಿಜಯರಾಘವೇಂಧ್ರ ಅವರ ಧರ್ಮಪತ್ನಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾದ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನ ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ ವಿಷಯ ತಿಳಿದು ಅಘಾತವಾಗಿದೆ. ಸಾವು ಅನಿರೀಕ್ಷಿತ. ವಿಜಯ ರಾಘವೇಂದ್ರ ಕಟುಂಬದ ಶೋಕದಲ್ಲಿ ನಾನೂ ಭಾಗಿಯಾಗುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ. : - – - – - ’ - .