ಸಚಿವ ಚಲುವರಾಯಸ್ವಾಮಿ ವಿರುದ್ಧ 7 ಸಹಾಯಕ ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ದೂರು. ಬೆಂಗಳೂರು,ಆಗಸ್ಟ್,7,2023(..):ಲಂಚಕ್ಕೆ ಬೇಡಿಕೆಯಟ್ಟ ಆರೋಪದ ಮೇಲೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯದ 7 ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕೃಷಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿಯುವುದಾಗಿ ದೂರಿನ ಪತ್ರದಲ್ಲಿಉಲ್ಲೇಖಿಸಿದ್ದಾರೆ ಎನ್ನಲಾಗಿದೆ. : - - - – -.