ಎರಡು ವರ್ಷ ಜೈಲುಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ.. ನವದೆಹಲಿ,ಆಗಸ್ಟ್,4,2023(..):ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ತಮಗೆ ಸೂರತ್ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತಡೆಯಜ್ಞೆ ಬೆನ್ನಲ್ಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ಸತ್ಯ ಗೆದ್ದೇ ಗೆಲ್ಲುತ್ತೆ. ನನ್ನ ಹಾದಿ ಬಗ್ಗೆ ಸ್ಪಷ್ಟವಾಗಿ ತಿಳಿದಿದೆ. ನನ್ನ ಕೆಲಸ ಏನು ಅನ್ನೋದು ನನ್ನ ಮನಸ್ಸಿನಲ್ಲಿದೆ. ನಮ್ಮ ಜೊತೆ ನಿಂತ ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು. ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಥವಾ ನಾಡಿದ್ದು ಸತ್ಯ ಗೆದ್ದೇ ಗೆಲ್ಲುತ್ತದೆ. ನನ್ನ ಹಾದಿ ಸ್ಪಷ್ಟವಾಗಿದೆ. ನಾನು ಏನು ಮಾಡಬೇಕು ಮತ್ತು ನನ್ನ ಕೆಲಸ ಏನು ಎಂದು ನನ್ನ ಮನಸ್ಸಿನಲ್ಲಿ ಸ್ಪಷ್ಟತೆ ಇದೆ. ನಮಗೆ ಸಹಾಯ ಮಾಡಿದ ಜನರಿಗೆ ನಾನು ಧನ್ಯವಾದಗಳು . ಜನರ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಸಹ ಧನ್ಯವಾದ ಹೇಳುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. : - – - – -- .