5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ. ಬೆಂಗಳೂರು, ಆಗಸ್ಟ್.4,2023(..):5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಬಿಎಂಪಿ ಕಂದಾಯ ನಿರೀಕ್ಷಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಬಿಎಂಪಿ ಮಹದೇವಪುರ ಕಂದಾಯ ಇಲಾಖೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ ನಟರಾಜ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಮಂಜನಾಥ್ ಹೂಗಾರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಖಾಸಗಿ ವ್ಯಕ್ತಿ ಪವನ್ ಮೂಲಕ ಲಂಚ ಸ್ವೀಕರಿಸುತ್ತಿದ್ದರು . ಇನ್ನು ನಟರಾಜ್ ಫ್ಲ್ಯಾಟ್ ಖಾತೆ ಮಾಡಿಕೊಡಲು 1 ಫ್ಲ್ಯಾಟ್​ಗೆ 10 ಸಾವಿರದಂತೆ 79 ಫ್ಲ್ಯಾಟ್ ​ಗೆ 7.90 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಅದರಂತೆ ಮುಂಗಡವಾಗಿ 5 ಲಕ್ಷ ರೂ. ಲಂಚ ಪಡೆಯುವಾಗ ಬಿಬಿಎಂಪಿ ಆರ್​ಐ ನಟರಾಜ್, ಆರೋಪಿ ಪವನ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. : 5 – – - -