ಮಾಜಿ ಸಿಎಂ ಹೆಚ್.ಡಿಕೆ ವರ್ಗಾವಣೆ ದಂಧೆ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ. ಬೆಂಗಳೂರು,ಆಗಸ್ಟ್,4,2023(..):ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಹೆಚ್.ಡಿ ಕುಮಾರಸ್ವಾಮಿ ಸಮಾಧಾನಕ್ಕೆ ಏನಾದರೂ ಮಾತನಾಡಲಿ, ಪಾಪ ಅವರು ವಿಶ್ರಾಂತಿ ತೆಗೆದುಕೊಂಡು ಬಂದಿದ್ದಾರೆ ಎಂದು ಟಾಂಗ್​ ನೀಡಿದರು. ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದೆ ಎಂಬ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಮಾಯನೋ ಜ್ಯೋತಿಷ್ಯನೋ, ಧರ್ಮನೋ, ಶ್ರಮನೋ 3 ವರ್ಷದ ಶ್ರಮ ಇದೆ. ಕಾರ್ಯಕರ್ತರನ್ನ ಮಲಗಲು ಬಿಟ್ಟಿಲ್ಲ. ಕುಮಾರಸ್ವಾಮಿಗೆ ಖುಷಿ ಸಿಗುವುದಾದರೇ ಮಾತನಾಡಲಿ ಎಂದು ಹೇಳಿದರು. : - - – – -