ಎಸ್ ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸರ್ಕಾರದಿಂದ ಅನ್ಯಾಯ- ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪ. ಬೆಂಗಳೂರು,ಆಗಸ್ಟ್,4,2023(..):ಗ್ಯಾರಂಟಿ ಯೋಜನೆಗೆ ಎಸ್​ಸಿ, ಎಸ್​ಟಿ ಅನುದಾನ ಬಳಕೆ ಆರೋಪ ಸಂಬಂಧ ಪರಿಶಿಷ್ಟ ಜಾತಿ, ಪಂಗಡಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು. ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ‘ಸಿದ್ದರಾಮಯ್ಯ ಸರ್ಕಾರ ಜನಪರ ಕೆಲಸ ಮಾಡುತ್ತೆ ಎಂಬ ನಿರೀಕ್ಷೆ ಇತ್ತು. ಆದರೆ, ಗ್ಯಾರಂಟಿ ಯೋಜನೆಗೆ ಎಸ್​ಸಿ, ಎಸ್​ಟಿ ಅನುದಾನ ಬಳಕೆ ಮಾಡುತ್ತಿದ್ದಾರೆ. ಈ ಮೂಲಕ ಎಸ್.ಸಿ ಎಸ್ ಟಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. : - – - – - -