ಫಾಕ್ಸ್‌ ಕಾನ್‌ ನಿಂದ ರಾಜ್ಯದಲ್ಲಿ 5000 ಕೋಟಿ ರೂ. ಹೂಡಿಕೆ ,13,000 ಉದ್ಯೋಗ ಸೃಷ್ಟಿ: ಒಪ್ಪಂದ ಪತ್ರಕ್ಕೆ ಸಹಿ. ಬೆಂಗಳೂರು,ಆಗಸ್ಟ್,2,2023(..):ಕರ್ನಾಟಕದಲ್ಲಿ ಬರೋಬ್ಬರಿ 5000 ಕೋಟಿ ರೂ. ಮೊತ್ತದ ಬಂಡವಾಳ ಹೂಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್‌ ಸಹಿ ಮಾಡಿದೆ. ಈ ಯೋಜನೆಗಳಿಂದ 13,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಚೆನ್ನೈನ ಹೋಟೆಲ್ ಲೀಲಾ ಪ್ಯಾಲೇಸ್‌ ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಫೋನ್ ಎನ್‌ಕ್ಲೋಸರ್ ಉತ್ಪಾದನಾ ಘಟಕ ಸ್ಥಾಪನೆ ಹಾಗೂ ಸೆಮಿಕಾನ್ ಉಪಕರಣಗಳ ಯೋಜನೆ ಜಾರಿ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಿದ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಈ ವಿಷಯವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಬುಧವಾರ ಅಧಿಕೃತವಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಚೆನ್ನೈನಲ್ಲಿ ತಮ್ಮ ಜತೆಗೆ ಐಟಿ ಬಿಟಿ, ಸಚಿವ ಪ್ರಿಯಾಂಕ್ ಖರ್ಗೆ, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಮತ್ತು ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು. ಈ ಎರಡೂ ಒಪ್ಪಂದಗಳು, ಈ ಮೊದಲು ಮಾಡಿಕೊಂಡಿದ್ದ 14 ಸಾವಿರ ಕೋಟಿ ಮೊತ್ತದ ಆ್ಯಪಲ್ ಫೋನ್ ತಯಾರಿಕಾ ಘಟಕ ಹೊರತಾದವು. ಇದಕ್ಕೂ ದೊಡ್ಡಬಳ್ಳಾಪುರ ಸಮೀಪ ಭೂಮಿ ನೀಡುವ ಕೆಲಸ ನಡೆಯುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದರು. “ಫಾಕ್ಸ್‌ಕಾನ್ ಮತ್ತು ಕರ್ನಾಟಕ ಸರ್ಕಾರದ ನಡುವಿನ ಈ ಒಪ್ಪಂದವು ತಂತ್ರಜ್ಞಾನದ ಪ್ರಗತಿ ಮತ್ತು ರಾಜ್ಯದ ಒಟ್ಟಾರೆ ಸಾಮಾಜಿಕ- ಆರ್ಥಿಕ ಬೆಳವಣಿಗೆಯಲ್ಲಿ ಗಮನಾರ್ಹ ಬದಲಾವಣೆ ತರಲಿದೆ. ಮುಖ್ಯವಾಗಿ ಸಾವಿರಾರು ನುರಿತ ಕೆಲಸಗಾರರಿಗೆ ಉದ್ಯೋಗ ದೊರೆಯುತ್ತದೆ. ರಾಜ್ಯದಲ್ಲಿ ಬಂಡವಾಳ ಹೂಡಲಿರುವ ಫಾಕ್ಸ್‌ ಕಾನ್‌ ಗೆ ಎಲ್ಲ ರೀತಿಯ ಬೆಂಬಲ ಒದಗಿಸಲು ನಮ್ಮ ಸರ್ಕಾರ ಬದ್ಧ” ಎಂದರು. “ತಂತ್ರಜ್ಞಾನ ಮತ್ತು ಆವಿಷ್ಕಾರ ವಲಯದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಫಾಕ್ಸ್‌ ಕಾನ್‌ ಮುಂದೆ ಬಂದಿರುವುದು ಸಂತೋಷದ ವಿಷಯ. ಬಂಡವಾಳ ಆಕರ್ಷಣೆ ಮತ್ತು ಕಂಪನಿಗಳಿಗೆ ಉತ್ತಮ ಪರಿಸರ ವ್ಯವಸ್ಥೆ ಕಲ್ಪಿಸಲು ನಮ್ಮ ನೀತಿಗಳು ಪೂರಕವಾಗಿವೆ ಎಂದು ಹೇಳಿದ್ದಾರೆ. “ಕರ್ನಾಟಕ ಸರ್ಕಾರದ ಜತೆ ಯೋಜಿತ ಹೂಡಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ನಮ್ಮ ಹೈಟೆಕ್ ಉದ್ಯಮಗಳಿಗೆ ರಾಜ್ಯ ಆಕರ್ಷಕ ತಾಣವಾಗಿದೆ. ಉದ್ಯಮಕ್ಕೆ ಪೂರಕವಾದ ವಾತಾವರಣವಿದ್ದು, ನುರಿತ ಕೆಲಸಗಾರರ ಲಭ್ಯತೆ ಇಲ್ಲಿನ ವಿಶೇಷ. ಈ 2 ಪ್ರಮುಖ ಯೋಜನೆಗಳ ಮೂಲಕ ರಾಜ್ಯದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇವೆ” ಎಂದು ಫಾಕ್ಸ್‌ ಕಾನ್‌ ನ ಅಧ್ಯಕ್ಷ ಯಂಗ್ ಲಿಯು ಹೇಳಿದ್ದಾರೆ. ಪ್ರಮುಖ ಯೋಜನೆಗಳ ವಿವರ: .. 5,000 13,000 - () : : () . 5,000 . 13,000 . .14,000 / . , ( ), ’ , ( 3,000 ) ($ 350 ) 12,000 . 2,000 ($ 250 ) generate1000 , . () . , . . , . , 100- . ’ . – - - , 35- . 2023 , . .. , & , , & , . : – 5,000 –- - - -