ವಿಪಕ್ಷ ನಾಯಕರ ಆಯ್ಕೆ ವಿಳಂಬ: ಬೇಸರ ಹೊರ ಹಾಕಿದ ಮಾಜಿ ಸಚಿವ ಡಾ.ಕೆ ಸುಧಾಕರ್ ಚಿಕ್ಕಬಳ್ಳಾಪುರ,ಆಗಸ್ಟ್,2,2023(..):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಅಧಿವೇಶನ ನಡೆದರೂ ಸಹ ಇನ್ನೂ ವಿಪಕ್ಷ ನಾಯಕರ ಆಯ್ಕೆಯಾಗದ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೇಸರ ಹೊರ ಹಾಕಿದ್ದಾರೆ. ಈ ಕುರಿತು ಮಾತನಾಡಿರುವ ಡಾ.ಕೆ.ಸುಧಾಕರ್, ಈವರೆಗೆ ವಿಪಕ್ಷ ನಾಯಕನನ್ನು ನೇಮಕ ಮಾಡದಿದ್ದಕ್ಕೆ ಬೇಸರವಾಗಿದೆ. ಈ ಬಗ್ಗೆ ಎಲ್ಲರೂ ಪ್ರಶ್ನಿಸುತ್ತಿದ್ದಾರೆ, ಪ್ರಶ್ನೆಗೆ ಉತ್ತರಿಸಲು ಮುಜುಗರ ಆಗುತ್ತಿದೆ ಎಂದು ಹೇಳಿದರು. ಚುನಾವಣೆ ಸೋಲನ್ನು ನಾಯಕರ ಮೇಲೆ ತೀರಿಸಿಕೊಳ್ಳುವುದು ಸರಿಯಲ್ಲ. ಬಿಜೆಪಿ ಹೈಕಮಾಂಡ್‌ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಧಾಕರ್ ಮನವಿ ಮಾಡಿದ್ದಾರೆ. : – - -. - -