ಪ್ರಧಾನಿ ಮೋದಿಯನ್ನ ಭೇಟಿಯಾದ ಸಿಎಂ ಸಿದ‍್ಧರಾಮಯ್ಯ: ಜಂಬೂ ಸವಾರಿ ಕಲಾಕೃತಿ ನೀಡಿ ಸನ್ಮಾನ. ನವದೆಹಲಿ,3,2023(..):ಕಾಂಗ್ರೆಸ್ ಹೈಕಮಾಂಡ್ ಸಭೆಗಾಗಿ ನಿನ್ನೆ ನವದೆಹಲಿಗೆ ತೆರಳಿದ್ದ ಸಿಎಂ ಸಿದ್ಧರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಹುಟ್ಟುಹಬ್ಬವಾಗಿದ್ದು ಇಂದೇ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸಿಎಂ ಸಿದ್ಧರಾಮಯ್ಯ ಭೇಟಿಯಾದರು. ಪ್ರಧಾನಿ ಮೋದಿಗೆ ಮೈಸೂರು ಪೇಟ, ಶಾಲು ಹೊದಿಸಿ ಸನ್ಮಾನಿಸಿದರು. ಶ್ರೀಗಂಧದ ಜಂಬೂ ಸವಾರಿ ಕಲಾಕೃತಿಯನ್ ಗಿಫ್ಟ್ ಆಗಿ ಪ್ರಧಾನಿ ಮೋದಿ ಅವರಿಗೆ ನೀಡಿದರು. ಸಿದ್ಧರಾಮಯ್ಯ ಸಿಎಂ ಆದ ಬಳಿಕ ಮೊದಲ ಭೇಟಿ ಇದಾಗಿದ್ದು ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರ್ಕಾರದ ಅನುದಾನ ಕುರಿತು ಪ್ರಧಾನಿ ಮೋದಿ ಬಳಿ ಚರ್ಚಿಸಿದ್ದಾರೆ ಎನ್ನಲಾಗಿದೆ. : – - -