ಆಗಸ್ಟ್‌ 5ಕ್ಕೆ ಕಲಬುರಗಿಯಲ್ಲಿ ‘ಗೃಹ ಜ್ಯೋತಿ’ಗೆ ಸಿಎಂ ಚಾಲನೆ: ಇಂಧನ ಸಚಿವ ಕೆ.ಜೆ ಜಾರ್ಜ್‌. ಬೆಂಗಳೂರು, ಆಗಸ್ಟ್,1,2023(..):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಆಗಸ್ಟ್ 5ರಂದು ಕಲಬುರಗಿಯ ಎನ್‌ವಿ ಮೈದಾನದಲ್ಲಿ ಬಹುನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಬಗ್ಗೆ ವಿವರ ನೀಡಲು ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌,”ಕರ್ನಾಟಕ ಸರ್ಕಾರದ 5 ಪ್ರಮುಖ ಭರವಸೆಗಳ ಪೈಕಿ ಒಂದಾದ’ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿಯವರು ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ರಾಜ್ಯಸಭೆಯ ಪತ್ರಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಿರಿಯ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು”, ಎಂದರು. “ಮಧ್ಯಮ ವರ್ಗದ ಜನರ ಜೀವನ ಸುಧಾರಣೆ ಮಾಡುವ ಮಹಾತ್ವಾಕಾಂಕ್ಷಿ ಯೋಜನೆ ಇದು. 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಯೋಜನೆ ಕೇವಲ ವಿದ್ಯುತ್ ಶುಲ್ಕದ ಕಡಿಮೆ ಮಾಡುತ್ತಿಲ್ಲ, ಬದಲಾಗಿ ಕುಟುಂಬದ ಆರ್ಥಿಕ ಪ್ರಗತಿಯ ಮೂಲಕ ಸಾಮಾಜಿಕ ಭದ್ರತೆ ನೀಡಲಿದೆ,”ಎಂದು ಜಾರ್ಜ್‌ ವಿವರಿಸಿದರು. “‘ಗೃಹ ಜ್ಯೋತಿ’ ಯೋಜನೆಯ ಅನುಷ್ಠಾನದ ಮೊದಲ ತಿಂಗಳಿನಲ್ಲೇ ಸುಮಾರು 1.42 ಕೋಟಿ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ಜುಲೈ 27ರ ಮೊದಲು ಅರ್ಜಿ ಸಲ್ಲಿಸಿದವರು ಮಾತ್ರ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್‌ನಲ್ಲಿ ಅವರ ಬಳಕೆಯ ಆಧಾರದ ಮೇಲೆ ಸೆಪ್ಟೆಂಬರ್‌ನ ಬಿಲ್ಲಿಂಗ್‌ನಲ್ಲಿ ಪ್ರಯೋಜನ ಪಡೆಯುತ್ತಾರೆ,”ಎಂದರು. “ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಘೋಷಿಸಿಲ್ಲ. ಯಾವುದೇ ಸಮಯದಲ್ಲಿ ನೋಂದಾಯಿಸಿಕೊಂಡರೂ ಅದರ ನಂತರದ ತಿಂಗಳಿನಿಂದ ಪ್ರಯೋಜನ ಪಡೆಯಬಹುದು. 1.42 ಕೋಟಿ ಅರ್ಜಿದಾರರ ಪೈಕಿ ಸುಮಾರು 18 ಲಕ್ಷ ಮಂದಿ ‘ಭಾಗ್ಯ ಜ್ಯೋತಿ’, ‘ಕುಟೀರ ಜ್ಯೋತಿ’ ಮತ್ತು ‘ಅಮೃತ್ ಜ್ಯೋತಿ’ಯಂತಹ ಹಾಲಿ ಯೋಜನೆಗಳ ಫಲಾನುಭವಿಗಳು,”ಎಂದು ಅವರು ತಿಳಿಸಿದರು. “2.14 ಕೋಟಿ ಗೃಹಬಳಕೆದಾರರ ಮಾಸಿಕ ವಿದ್ಯುತ್ ಬಳಕೆಯ ಅಂದಾಜು ನಿರ್ಧರಿಸಲು ಈಗಾಗಲೇ ಒಂದು ವರ್ಷದ ವಿದ್ಯುತ್ ಬಳಕೆಯ ಸರಾಸರಿ ಲೆಕ್ಕಾಚಾರ ಮಾಡಲಾಗಿದೆ. 2022- 2023 ಹಣಕಾಸು ವರ್ಷದ ಸರಾಸರಿ ಬಳಕೆಯನ್ನು ಪರಿಗಣಿಸಿ, ಪ್ರತಿ ಗ್ರಾಹಕರ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ 10 ಪ್ರತಿಶತವನ್ನು ನೀಡುವ ಮೂಲಕ ಮಾಸಿಕ ವಿದ್ಯುತ್ ಬಳಕೆಯ ಅಂದಾಜು ನಿರ್ಧರಿಸಲಾಗುತ್ತದೆ. ಆದಾಗ್ಯೂ, ಗರಿಷ್ಠ ಉಚಿತ ವಿದ್ಯುತ್ ಬಳಕೆಯ ಮಿತಿಯನ್ನು 200 ಯುನಿಟ್‌ಗಳಿಗೆ ನಿರ್ಬಂಧಿಸಲಾಗಿದೆ,” ಎಂದರು. “ಸರಾಸರಿ ಬಳಸುವ ಯೂನಿಟ್‌ ವಿದ್ಯುತ್ 200 ಯೂನಿಟ್‌ ಗಳಿಗಿಂತ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸರಾಸರಿಗಿಂತ ಹೆಚ್ಚಿನ ಯೂನಿಟ್ ಬಳಸಿದರೆ, ಹೆಚ್ಚುವರಿ ಯೂನಿಟ್‌ಗೆ ಮಾತ್ರ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ,200ಕ್ಕೂ ಹೆಚ್ಚು ಯೂನಿಟ್ ಬಳಸಿದರೆ ಪೂರ್ಣ ಶುಲ್ಕ ಪಾವತಿಸಬೇಕಾಗುತ್ತದೆ,” ಎಂದು ಸಚಿವ ಕೆ.ಜೆ ಜಾರ್ಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಇಂಧನ, ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಪಂಂಕಜ್ ಕುಮಾರ್ ಪಾಂಡೆ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಗೃಹ ಜ್ಯೋತಿ ಯೋಜನೆಯ ಪ್ರಮುಖ ವಿವರಗಳು ಹೀಗಿದೆ.. .. • ‘ ’ 5 .. • , • 1.42 2023 • 27 2023 2023 • . , 1 2023 – ‘ ’ 5 2023, .. , . , ‘ ’ , , , .’ ,’ 200 . - , , , . 1.42 , . 27 , . , . 1.42 , 18 , , . 2.14 . 2022- 2023 , 10 . , 200 . 200 , . , . , 200 , . , , & , , , , , . : – - – - 5- -