ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಸರ್ಕಾರ ಯತ್ನ-ಮಾಜಿ ಸಚಿವ ಬಿಸಿ ನಾಗೇಶ್ ಆರೋಪ. ತುಮಕೂರು,ಜುಲೈ,29,2023(..):ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನ ಮುಚ್ಚಿ ಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್​ ಆರೋಪ ಮಾಡಿದ್ದಾರೆ. ತುಮಕೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಬಿ.ಸಿ ನಾಗೇಶ್, ಪ್ರಕರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಹೀಗಾಗಿ ಈ ಪ್ರಕರಣ ಮುಚ್ಚಿಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ಪೊಲೀಸರು ಮೊಬೈಲ್ ವಶಪಡಿಸಿಕೊಳ್ಳುವ ಪ್ರಯತ್ನ ಏಕೆ ಮಾಡಿಲ್ಲ. ಈ ಘಟನೆಯನ್ನು ಖಂಡಿಸಿ ನಮ್ಮ ಕಾರ್ಯಕರ್ತೆ ಟ್ವೀಟ್​​ ಮಾಡಿದ್ರು. ಆಕೆಯನ್ನು ಉಗ್ರಗಾಮಿಯ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ವಾಗ್ದಾಳಿ ನಡೆಸಿದರು. : - – – - –- - -