ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೋಕ್. ಬೆಂಗಳೂರು,ಜುಲೈ,29,2023(..):ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಬಿಜೆಪಿ ಇದೀಗ ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿ ಅವರಿಗೆ ಕೋಕ್ ನೀಡಲಾಗಿದೆ. ಬಿಜೆಪಿ ನಡೆ ಬಾರಿ ಕುತೂಹಲ ಮೂಡಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಈ ನಡುವೆ ಮಾಜಿ ಸಚಿವ ಸಿ.ಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದಾರೆ. ಇನ್ನು ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್​.ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. : .. – - –- - - -