ನಾನು ಮುಂದಿನ ಅವಧಿಯಲ್ಲಿ ಸಿಎಂ ಹುದ್ದೆ ರೇಸ್ ನಲ್ಲಿರುತ್ತೇನೆ- ಸಚಿವ ಸತೀಶ್ ಜಾರಕಿಹೊಳಿ. ಬೆಂಗಳೂರು,ಜುಲೈ,28,2023(..):ನಾನು ಈ ಅವಧಿಯಲ್ಲಿ ಸಿಎಂ ರೇಸ್ ​​ನಲ್ಲಿ ಇಲ್ಲ, ಮುಂದಿನ ಅವಧಿಯಲ್ಲಿ ಸಿಎಂ ಹುದ್ದೆ ರೇಸ್ ನಲ್ಲಿರುತ್ತೇನೆ ಎಂದು ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಬಿ.ಕೆ.ಹರಿಪ್ರಸಾದ್​​ ಕಾಂಗ್ರೆಸ್ ಕುಟುಂಬದ ಸದಸ್ಯರು. ಅವರ ಹೇಳಿಕೆ ಕರ್ನಾಟಕಕ್ಕೆ ಸಂಬಂಧಪಟ್ಟಿಲ್ಲ. ಹರಿಪ್ರಸಾದ್ ಅವರ ಅನುಭವ ಹಂಚಿಕೊಂಡಿದ್ದಾರೆ. ಕೆಲವು ಸಮುದಾಯಗಳಿಗೆ ಅವಕಾಶ ಸಿಗಲಿಲ್ಲ ಎಂದರು. ಇನ್ನು ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ, ಸಿಎಂ ಅಧಿಕಾರ ಹಂಚಿಕೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರ ಹೈಕಮಾಂಡ್​ ಗೆ ಬಿಟ್ಟಿದ್ದು, ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ. ಸಿಎಂ ಆಗಿ ಸಿದ್ದರಾಮಯ್ಯ ಅವರು ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. : – - - - .