ಬಿಗಿ ಭದ್ರತೆಯೊಂದಿಗೆ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಬಳ್ಳಾರಿ,ಆಗಸ್ಟ್,29,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ರನ್ನು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇಂದು ಬೆಳಿಗ್ಗೆ ದರ್ಶನ್‌ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಜೈಲಿಗೆ ಕರೆತರಲಾಗಿದ್ದು ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ. ನಟ ದರ್ಶನ್ ಬಳ್ಳಾರಿ ಜೈಲಿಗೆ ಕರೆ ತರುವ ಹಿನ್ನಲೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಡಾ.ಶೋಭಾರಾಣಿ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ , ನಟ ದರ್ಶನ್ ಗೆ ಅರೋಗ್ಯ ತಪಾಸಣೆ ನಡೆಸಿ ನಂತರ ಹೈ ಸೆಕ್ಯೂರಿಟಿ ಸೆಲ್ ಗೆ ಶಿಫ್ಟ್ ಮಾಡಲಾಗುತ್ತಿದೆ. ಜೈಲಿನ ಸುತ್ತ ಅಭಿಮಾನಿಗಳು ಸೇರುವ ಹಿನ್ನೆಲೆಯಲ್ಲಿ ಜೈಲಿನ ಹೊರಗೆ ಬಿಗಿ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಫೋಟೊ ವೈರಲ್ ಆಗಿತ್ತು. ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿ ಸಾಕಷ್ಟು ಟೀಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇನ್ನು ನಟ ದರ್ಶನ್ ಮತ್ತು ತಂಡಕ್ಕೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ. : , ,