ಡಿಕೆ ಶಿವಕುಮಾರ್ ವಿರುದ್ದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ತನಿಖೆ ಕುರಿತು ನಾಳೆ ತೀರ್ಪು ಪ್ರಕಟ ಬೆಂಗಳೂರು,ಆಗಸ್ಟ್, 28,2024 (..):ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದನ್ನು ಹಿಂಪಡೆದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತ್ತು. ಡಿಕೆ ಶಿವಕುಮಾರ್ ವಿರುದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತನಿಖೆ ಕುರಿತು ನಾಳೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತೀರ್ಪು ಪ್ರಕಟ ಮಾಡಲಿದೆ. : , , , , ,