ಭಾರೀ ಮಳೆ ಹಿನ್ನೆಲೆ: ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ ಮಂಡ್ಯ,ಜುಲೈ,28,2023(..):ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಈ ನಡುವೆ ಮಲೆನಾಡಿನಲ್ಲಿ ಭಾರಿ ಮಳೆಯಾದ ಹಿನ್ನೆಲೆ, ಕಾವೇರಿ ನದಿಗೆ ಒಳಹರಿವು ಹೆಚ್ಚಾಗಿದ್ದು, ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಕೆಆರ್​ಎಸ್ ಡ್ಯಾಂನಲ್ಲಿ ಪ್ರಸ್ತುತ ನೀರಿನ ಮಟ್ಟ ಮಟ್ಟ 110.82 ಅಡಿ ಇದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಕೆಆರ್ ಎಸ್ ಜಲಾಶಯಕ್ಕೆ 33,566 ಕ್ಯೂಸೆಕ್ ನೀರು ಒಳಹರಿವು, 3071 ಕ್ಯೂಸೆಕ್ ನೀರು ಹೊರ ಹೋಗುತ್ತಿದೆ. : – - - –