ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಅಸಾದ್ ಉರ್ ರೆಹಮಾನ್ ಶರೀಫ್ ನೇಮಕ ಮೈಸೂರು,ಜುಲೈ,27,2023(..):ಮೈಸೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಅಸಾದ್ ಉರ್ ರೆಹಮಾನ್ ಶರೀಫ್ ನೇಮಕವಾಗಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಅಸಾದ್ ಉರ್ ರೆಹಮಾನ್ ಶರೀಫ್ ರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಮೈಸೂರು ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ಸ್ಥಳ ನಿಗದಿ ಮಾಡದೆ ವರ್ಗಾವಣೆ ಮಾಡಲಾಗಿದೆ. ಶರೀಫ್ ಅವರು ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದಲ್ಲಿ ಜಂಟಿ ನಿರ್ದೇಶಕರಾಗಿದ್ದರು. : - – - - -