ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ.. ಬೆಂಗಳೂರು,ಜುಲೈ,27,2023(..):ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಪ್ರತಿಭಟನೆ ನಡೆಸಲಿದರು. ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನ ತಡೆದಿದ್ದು, ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದರು. ಬಿಜೆಪಿ ಪ್ರತಿಭಟನೆ ಹಿನ್ನೆಲೆ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಪೊಲೀಸ್ ಭದ್ರತೆ ವಹಿಸಲಾಗಿದ್ದು, ಒಂದು ಕೆಎಸ್​ಆರ್​ಪಿ ತುಕಡಿ ಕೂಡ ನಿಯೋಜನೆ ಮಾಡಲಾಗಿದೆ : - . . –- -