ಭಾರತೀಯ ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೊರಕ್ಕೆ ?! ಬೆಂಗಳೂರು, ಜುಲೈ 26, 2023 (..):ಮುಂಬರಲಿರುವ ಭಾರತೀಯ ಕುಸ್ತಿ ಫೆಡರೇಷನ್​ನ ಚುನಾವಣಾ ಕಣದಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಮಗ ಕರಣ್ ಹೆಸರನ್ನು ಕೈಬಿಡಲಾಗಿದೆ ಎನ್ನಲಾಗುತ್ತಿದೆ. ಆಗಸ್ಟ್ 12 ರಂದು ನಡೆಯಲಿರುವ ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಕರಣ್ ಇಬ್ಬರನ್ನು ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬ್ರಿಜ್ ಭೂಷಣ್ ಅವರ ಕಿರಿಯ ಪುತ್ರ ಉತ್ತರ ಪ್ರದೇಶ ಕುಸ್ತಿ ಸಂಘದ ಅಧ್ಯಕ್ಷರಾಗಿರುವ ಕರಣ್ ಹೆಸರನ್ನು ಅಂತಿಮ ಪಟ್ಟಿಯಿಂದ ಕೈ ಬಿಡಲಾಗಿದೆ. ಬ್ರಿಜ್ ಭೂಷಣ್ ಅಳಿಯ ವಿಶಾಲ ಪ್ರತಾಪ್ ಸಿಂಗ್ ಹೆಸರು ಪಟ್ಟಿಯಲ್ಲಿದೆ. ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಹಾಗೆಯೇ ಅವರನ್ನು ಅಧಿಕಾರದಿಂದ ಕೆಳಗಿಳಿಸುವಂತೆ ಹಾಗೂ ಬಂಧಿಸುವಂತೆ ಒತ್ತಾಯಿಸಿ ತಿಂಗಳುಗಳ ಕಾಲ ನಿರಂತರ ಪ್ರತಿಭಟನೆ ನಡೆಸಿದ್ದರು.