ಮಳೆಗೆ ಮನೆ ಕುಸಿದು ಗಾಯಗೊಂಡಿದ್ದ ಮಗು ಸಾವು. ಹಾವೇರಿ,ಜುಲೈ,25,2023(..):ಭಾರಿ ಮಳೆಗೆ ಮನೆ ಕುಸಿದು ಗಾಯಗೊಂಡಿದ್ದ ಮಗು ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಮಾಳಪುರ ಗ್ರಾಮದಲ್ಲಿ ಈ ಘಟನ ನಡೆದಿದ್ದು, ಎರಡು ದಿನಗಳ ಹಿಂದೆ ಮನೆಕುಸಿದು ಗಾಯಗೊಂಡಿದ್ದ ಭಾಗ್ಯಮೂರು ವರ್ಷದ ಮಗುವನ್ನ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –-- –