ಕೆಲವರ ಕಪಿಮುಷ್ಠಿಯಲ್ಲಿ ರಾಜ್ಯ ಬಿಜೆಪಿ: ಅವರಲ್ಲಿ ನಾಯಕತ್ವವೇ ಇಲ್ಲ- ಮಾಜಿ ಸಿಎಂ ಜಗದೀಶ್ ಶೆಟ್ಟರ್. ಹುಬ್ಬಳ್ಳಿ,ಜುಲೈ,22,2023(..):ರಾಜ್ಯ ಬಿಜೆಪಿ ಕೆಲವರ ಕಪಿಮುಷ್ಠಿಯಲ್ಲಿದೆ. ಬಿಜೆಪಿಯಲ್ಲಿ ನಾಯಕತ್ವವೇ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟೀಕಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಜಗದೀಶ್ ಶೆಟ್ಟರ್, ರಾಜ್ಯ ಬಿಜೆಪಿ ಕೆಲವರ ಕಪಿಮುಷ್ಠಿಯಲ್ಲಿದೆ. ಮೊದಲಿನಿಂದಲೂ ಇದನ್ನೇ ಹೇಳುತ್ತಿದ್ದೆ. ನನ್ನಮಾತು ಈಗ ಸಾಬೀತಾಗಿದೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವವೇ ಇಲ್ಲ ವಿಪಕ್ಷ ನಾಯಕನಿಲ್ಲದೇ ಅಧಿವೇಶನ ನಡೆಸಲಾಗಿದೆ. ಬಿಜೆಪಿ ಇಂತಹ ಸೂಚನೀಯ ಸ್ಥಿತಿಗೆ ತಲುಪಿದೆ ಎಂದು ಕಿಡಿಕಾರಿದರು. ರಾಜ್ಯಬಿಜೆಪಿ ನಾಯಕನಿಲ್ಲದೆ ಕುಸಿಯುತ್ತಿದೆ. ಕಾಂಗ್ರೆಸ್ ಮತ್ತಷ್ಟು ಬಲಿಷ್ಟವಾಗುತ್ತಿದೆ. ಲೋಕಸಭೆಯಲ್ಲಿ ನಾವು ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಎಂದರು. : - – – - - .