ಅರುಣಾಚಲ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪ ಬೆಂಗಳೂರು,ಜುಲೈ22, 2023 (..):ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ 6:56ಕ್ಕೆ ಅರುಣಾಚಲ ಪ್ರದೇಶದ ತವಾಂಗ್ ಬಳಿ ಭೂಮಿಯಿಂದ 5 ಕಿಲೋಮೀಟರ್ ಆಳದಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಭೂ ಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ ಎಂದು ಭೂಕಂಪಶಾಸ್ತ್ರ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.