660 ಪಿಡಿಒ, 604 ಗ್ರೇಡ್ 1- 719 ಗ್ರೇಡ್-2 ಕಾರ್ಯದರ್ಶಿ ಹುದ್ದೆಗಳ ನೇಮಕ ಶೀಘ್ರ ಬೆಂಗಳೂರು,ಜುಲೈ22, 2023 (..):ಶೀಘ್ರವೇ 660 ಪಿಡಿಒ, 604 ಗ್ರೇಡ್ 1 ಕಾರ್ಯದರ್ಶಿ ಹಾಗೂ 719 ಗ್ರೇಡ್-2 ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ 660 ಪಿಡಿಒ, 604 ಗ್ರೇಡ್ 1 ಕಾರ್ಯದರ್ಶಿ ಹಾಗೂ 719 ಗ್ರೇಡ್-2 ಕಾರ್ಯದರ್ಶಿ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮೊದಲ ಹಂತದಲ್ಲಿ 150 ಪಿಡಿಒಗಳ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಉಳಿದ 510 ಪಿಡಿಒಗಳ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜತೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಅಧಿಕಾರಿಗಳನ್ನು ವಾಪಸ್ ಮಾತೃ ಇಲಾಖೆಗೆ ಕರೆಸಿಕೊಳ್ಳಲು ಆದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.