ನಟ ದರ್ಶನ್ ಗೆ ಜೈಲೇ ಗತಿ: ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಬೆಂಗಳೂರು,ಆಗಸ್ಟ್,28,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ 13 ದಿನಗಳ ಕಾಲೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಪ್ರಕರಣ ಸಂಬಂಧ ಇಂದು ನಟ ದರ್ಶನ್ ಅವರನ್ನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೂ 13 ದಿನಗಳ ಕಾಲ ಅಂದರೇ ಸೆಪ್ಟಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ನಡುವೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಇಂದು ಸ್ಥಳಾಂತರಿಸಲಿದ್ದಾರೆ. : , , ,