ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಸುಗಮ ಕಲಾಪಕ್ಕೆ ಮನವಿ ಮಾಡಿದ ಪ್ರಧಾನಿ ಮೋದಿ. ನವದೆಹಲಿ,ಜುಲೈ,20,2023(..):ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಸುಗಮ ಕಲಾಪ ನಡೆಯಲು ಸಹಕಾರ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು. ಸಂಸತ್ ಭವನದ ಬಳಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸುಗಮ ಕಲಾಪ ನಡೆಯಲು ವಿಪಕ್ಷಗಳು ಸಹಕಾರ ನೀಡಬೇಕು. ಈ ಬಾರಿ ಸುಗಮವಾಗಿ ಕಲಾಪ ನಡೆಯುವ ವಿಶ್ವಾಸವಿದೆ. ಎಲ್ಲಾ ವಿಚಾರಗಳ ಬಗ್ಗೆಯೂ ಮುಕ್ತ ಚರ್ಚೆಗೆ ಅವಕಾಶವಿದೆ. ಸುಗಮ ಕಲಾಪಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು. : – - – --