ಜೈನಮುನಿ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ- ಸಿಎಂ ಸಿದ್ದರಾಮಯ್ಯ ಘೋಷಣೆ. ಬೆಂಗಳೂರು,ಜುಲೈ,19,2023(..):ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ಧರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆಯಾಗಿತ್ತು. ಈ ಪ್ರಕರಣ ಅತಿ ಸೂಕ್ಷ್ಮವಾಗಿರುವುದರಿಂದ ಸಿಐಡಿ ತನಿಖೆಗೆ ಹಸ್ತಾಂತರ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಜುಲೈ 6 ರಂದು ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆಯಾಗಿತ್ತು. ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. : - - – - - .