ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ- ಮಹಾಘಟಬಂಧನ್ ವಿರುದ್ಧ ಮಾಜಿ ಸಿಎಂ ಹೆಚ್.ಡಿಕೆ ವಾಗ್ದಾಳಿ.. ಬೆಂಗಳೂರು,ಜುಲೈ,17,2023(..):ಇಂದು ಬೆಂಗಳೂರಿನಲ್ಲಿ ಮಹಾಮೈತ್ರಿಕೂಟ ಸಭೆ ಆಯೋಜಿಸಿದ್ದು ಈ ನಡುವೆ ಮಹಾಘಟಬಂದನ್ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ ಅವರು. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಆಹ್ವಾನ ಕೊಟ್ಟರು, ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ ಎಂದರು. ಎನ್​ಡಿಎ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿದ ಹೆಚ್.ಡಿಕೆ, ಇನ್ನೂ ದಿನಗಳಿವೆ ನೋಡೊಣ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಹೇಳಿದರು. : – – - - - -.