ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ ಮೈಸೂರು, ಜುಲೈ 16, 2023 (..):ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಸುರೇಶ್ (30) ಬಂಧಿತ ಆರೋಪಿ. ಅಂಗಡಿಗೆ ಹೋಗುತ್ತಿದ್ದ 6 ವರ್ಷದ ಬಾಲಕಿಯನ್ನ ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಈತ ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ಕಿರುಚಾಟ ಕೇಳಿ ದೌಡಾಯಿಸಿದ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಬನ್ನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.