ವಿರೋಧ ಪಕ್ಷಗಳಿಗೆ ದೇಶದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ: ಮತ್ತೆ ಬಿಜೆಪಿಯೇ ಅಧಿಕಾರಕ್ಕೆ- ಶಾಸಕ ಬಿ.ವೈ ವಿಜಯೇಂದ್ರ. ಬೆಂಗಳೂರು,ಜುಲೈ,17,2023(..):ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಹಾಮೈತ್ರಿಕೂಟ ಸಭೆ ಬಗ್ಗೆ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ವಿರೋಧ ಪಕ್ಷಗಳಿಗೆ ದೇಶದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ. ಏನೇ ನಾಟಕ ಮಾಡಿದರೂ ಜನ ವಿಪಕ್ಷಗಳಿಗೆ ಬುದ್ಧಿ ಕಲಿಸುತ್ತಾರೆ. ದೇಶದಲ್ಲಿ ಮತ್ತೊಮ್ಮೆ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ. ಇದನ್ನು ತಡೆಯಲು ಯಾವ ಶಕ್ತಿಗಳಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. : –- -- – – - .. .