ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಆನಂದ್ ಸಿಂಗ್ ವಿಜಯನಗರ,ಜುಲೈ,15,2023(..):ಮಾಜಿ ಸಚಿವ ಆನಂದ್ ಸಿಂಗ್ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜುಲೈ 1ರಿಂದಲೇ ಅನ್ವಯ ಆಗುವಂತೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರ ಅನುಕೂಲಕ್ಕೆ ಸ್ಥಾಪಿಸಿರುವ ಸಹಕಾರಿ ಬ್ಯಾಂಕ್​ಗೆ 100 ವರ್ಷದ ಇತಿಹಾಸ ಹೊಂದಿದೆ. : - – – -