ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು ಬೆಂಗಳೂರು, ಆಗಸ್ಟ್, 27,2024 (..):ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು. : , , , ,