ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ಬೆಂಗಳೂರು ಜುಲೈ,14,2023(..):ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯತು. ಟೆಂಡರ್ ಪ್ರಕ್ರಿಯೆಗಳಲ್ಲಿಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಹಾಗೂ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ತಿದ್ದುಪಡಿಗಳನ್ನು ಒಳಗೊಂಡಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಇದಾಗಿದೆ. ಈ ವಿಧೇಯಕದಲ್ಲಿ ಎಸ್​ಸಿ, ಎಸ್​​​ಟಿ ಗುತ್ತಿಗೆದಾರರಿಗೆ ಟೆಂಡರ್ ವಿನಾಯಿತಿಗೆ ಅವಕಾಶ ನೀಡಲಾಗಿದೆ. 50 ಲಕ್ಷದಿಂದ 1 ಕೋಟಿ ರೂ.ಗೆ ಟೆಂಡರ್ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ. : - - - - –