ಇದು ಅನ್ನಭಾಗ್ಯ ಅಲ್ಲ ಕನ್ನಭಾಗ್ಯ ಯೋಜನೆ- ಸರ್ಕಾರದ ವಿರುದ್ದ ಮಾಜಿ ಸಿಎಂ ಬೊಮ್ಮಾಯಿ ಗುಡುಗು. ಬೆಂಗಳೂರು,ಜುಲೈ,13,2023(..):ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಕುರಿತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಗ್ಯಾರಂಟಿ ಬದಲಿಗೆ ದೋಖಾ ನಡೆದಿದೆ. 3 ಕೆಜಿ ಅಕ್ಕಿ, 2 ಕೆಜಿ ಜೋಳ ಅಥವಾ ರಾಗಿ ಕೊಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಹೇಳುತ್ತಿದ್ದಾರೆ. ಇದು ಅನ್ನಭಾಗ್ಯ ಅಲ್ಲ ಕನ್ನಭಾಗ್ಯ ಯೋಜನೆ. ಕೇಂದ್ರದ ಅಕ್ಕಿ ಹೊರತುಪಡಿಸಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈ ಬಗ್ಗೆ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ಕೊಡಬೇಕಿದೆ ಎಂದು ಬಸವರಾಜ ಬೊಮ್ಮಾಯಿ ಗುಡುಗಿದರು. : – -- - – - .