ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರ: ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ. ಬೆಂಗಳೂರು,ಜುಲೈ,12,2023(..):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ದ ಕಾಂಗ್ರೆಸ್ ನಾಯಕರು ಮೌನಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಮೌನ​ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಸಚಿವರುಗಳಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. : – – - - -.