ಶೀಘ್ರವೇ 2.50 ಲಕ್ಷ ಸರ್ಕಾರಿ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ ಬೆಂಗಳೂರು, ಜುಲೈ 09, 2023 (..):ಶೀಘ್ರವೇ 2.50 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹೌದು. ರಾಜ್ಯ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಪ್ರಿಯಾಂಕ್ ಖರ್ಗೆ ಸಿಹಿಸುದ್ದಿ ನೀಡಿದ್ದಾರೆ. ಚುನಾವಣೆ ಪೂರ್ವ ನಮ್ಮ ಪಕ್ಷ ಪ್ರಾಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಂತ ಹಂತವಾಗಿ ಖಾಲಿ ಇರುವ 2.50 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ, ನ್ಯಾಯಾಲಯದ‌ ತೀರ್ಪಿನಂತೆ ಕ್ರಮ‌ ವಹಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.