ಸಿಎಂ ಸಿದ‍್ಧರಾಮಯ್ಯ ಮಂಡಿಸಿದ ಬಜೆಟ್ ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.. ಬೆಂಗಳೂರು,ಜುಲೈ,,7,2023(..):ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಇಂದು ಸಿಎಂ ಸಿದ‍್ಧರಾಮಯ್ಯ ಮಂಡನೆ ಮಾಡಿದ್ದು ಹಲವು ಜನರಪರ ಕಾರ್ಯಕ್ರಮಗಳನ್ನ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ತಮ್ಮ 14ನೇ ಬಜೆಟ್ ಅನ್ನು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವದಡಿ ಇಂದು ಮಂಡಿಸಿದ್ದು, ಬಜೆಟ್ ನ ಸಂಪೂರ್ಣ ವಿವರ ಈ ಕೆಳಕಂಡಂತಿದೆ. 3.ಇದು ನಾನು ಮಂಡಿಸುತ್ತಿರುವ ಹದಿನಾಲ್ಕನೆಯ ಆಯವ್ಯಯ ಪತ್ರ. ಮುಖ್ಯಮಂತ್ರಿಯಾಗಿ, ವಿತ್ತೀಯ ಹೊಣೆಯನ್ನು ಹೊತ್ತು ಮಂಡಿಸುತ್ತಿರುವ ಏಳನೆಯ ಬಜೆಟ್‌. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆರು ಆಯವ್ಯಯ ಪತ್ರಗಳನ್ನು ಮಂಡಿಸಿದ್ದೆ. ನನ್ನ ಇಷ್ಟೂ ಆಯವ್ಯಯ ಪತ್ರಗಳ ಹಿಂದೆ ಯಾವ ಕಲ್ಯಾಣ ರಾಜ್ಯದ ಕನಸನ್ನು ಸಾಕಾರಗೊಳಿಸಲು ಈ ನಾಡಿನ ಶ್ರೇಷ್ಠ ಮನಸ್ಸುಗಳು ಬಯಸಿದ್ದವೋ ಅದನ್ನು ಈಡೇರಿಸಲೇಬೇಕೆನ್ನುವ ಉದ್ದೇಶ, ಬದ್ಧತೆಗಳು ಸ್ಪಷ್ಟವಾಗಿವೆ. ನಮ್ಮ ಪಕ್ಷದ ಧ್ಯೇಯೋದ್ದೇಶವೂ ಸಹ ಇದುವೇ ಆಗಿದೆ. 2023-24 ರ ಆಯವ್ಯಯವನ್ನು ರೂಪಿಸುವಾಗ ರಾಜ್ಯ ಸರ್ಕಾರವು ಬೇಡಿಕೆಗಳನ್ನು ವಾಸ್ತವಗಳೊಂದಿಗೆ ಹಾಗೂ ಸುಸ್ಥಿರ ಅಭಿವೃದ್ಧಿಯೊಂದಿಗೆ ಸಮನ್ವಯಗೊಳಿಸುವ ಮೂಲಕ ವಸ್ತುಸ್ಥಿತಿ ಆಧಾರಿತ, ಫಲಿತಾಂಶ ಕೇಂದ್ರಿತ, ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಪ್ರಜ್ಞಾಪೂರ್ವಕವಾಗಿ ತೀರ್ಮಾನಿಸಿದೆ. 17.ನಾವು ಗ್ಯಾರಂಟಿ ಯೋಜನೆಗಳನ್ನು ಯಾಕೆ ಘೋಷಿಸಿದ್ದೇವೆ? ಹಾಗೂ ಯಾಕೆ ಜಾರಿಗೊಳಿಸುತ್ತಿದ್ದೇವೆ? ಅವು ಬಿಟ್ಟಿ ಕೊಡುಗೆಗಳಲ್ಲ. ಈ ಸಂದರ್ಭದಲ್ಲಿ ಬಾಬಾಸಾಹೇಬ್ ಡಾ. ಬಿ. ಆರ್.‌ ಅಂಬೇಡ್ಕರ್‌ ಅವರ ಚಿಂತನೆಯನ್ನು ಸ್ಮರಿಸುತ್ತೇನೆ. ʻಭದ್ರತೆಯ ಖಾತರಿ ಕೊಡದ ಆರ್ಥಿಕ ಯೋಜನೆಯಿಂದ ಯಾವ ಉಪಯೋಗವೂ ಇಲ್ಲ. ಯೋಜನೆ ಒಪ್ಪಿತವಾಗಬೇಕಾದರೆ, ಅದು ಮಿತವ್ಯಯದ್ದು ಮತ್ತು ಸುಭದ್ರವು ಆಗಿರಬೇಕು. ಅದು ಮಿತವ್ಯಯದ್ದು ಆಗಿರದಿದ್ದರೆ, ಬಹುಶ: ನಡೆದೀತು. ಆದರೆ, ಸುಭದ್ರವಾಗಿಲ್ಲದಿದ್ದರೆ, ಖಂಡಿತ ನಡೆಯುವುದಿಲ್ಲʼ. ಮುಕ್ತ ಮಾರುಕಟ್ಟೆಯ ಈ ಯುಗದಲ್ಲಿ ಬಂಡವಾಳ ಹೂಡಿಕೆಯನ್ನು ವ್ಯಾಪಕವಾಗಿ ಆಕರ್ಷಿಸುವುದು, ಉದ್ಯೋಗಸಹಿತ ಬೆಳವಣಿಗೆಯನ್ನು ಸಾಕಾರಗೊಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದದ್ದು ಸಂಪತ್ತಿನ ವ್ಯಾಪಕ ಅಸಮಾನ ಹಂಚಿಕೆಯು ಸೃಷ್ಟಿಸುವ ಬೃಹತ್ ಕಂದರವು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳುವುದಾಗಿದೆ. ಅಭಿವೃದ್ಧಿಯ ಫಲವನ್ನು ಬಡವರು, ಶೋಷಿತರು ಹಾಗೂ ದುರ್ಬಲ ವರ್ಗದವರಿಗೆ ಹಂಚುವ ನಮ್ಮ ಪ್ರಯತ್ನವಾಗಿದೆ. ಅಭಿವೃದ್ಧಿಯ ಸಾಹಿತ್ಯದಲ್ಲಿ ಆರ್ಥಿಕ ಪ್ರಗತಿಯ ಫಲಗಳು ಬಡವರಿಗೆ ಸಹಜವಾಗಿ ಹರಿದುಬರುತ್ತದೆ ( ) ಎಂಬ ನಂಬಿಕೆ ಹುಸಿಯಾದ ಸಂದರ್ಭದಲ್ಲಿ ಬಡವರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಬೇಷರತ್ತಾಗಿ ನಗದು ವರ್ಗಾವಣೆ ಮಾಡುವುದು ಮಹಿಳಾ ಸಬಲೀಕರಣ ಹಾಗೂ ಅವರ ಖರೀದಿಸುವ ಸಾಮರ್ಥ್ಯ ಹೆಚ್ಚಿಸುವ ಪರಿಣಾಮಕಾರಿ ಮಾರ್ಗವೆಂಬುದು ಸಾಬೀತಾಗಿದೆ. ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು. ವಿತ್ತೀಯ ಸಂಪನ್ಮೂಲಗಳು ಹಾಗೂ ಆಡಳಿತದ ದಕ್ಷ ನಿರ್ವಹಣೆ ಒಂದು ಕಲೆ ಮತ್ತು ವಿಜ್ಞಾನ; ಕೇವಲ ಸಾಮಾಜಿಕ ಜಾಲತಾಣಗಳ ಸಂದೇಶವಲ್ಲ ಎಂಬುದನ್ನು ಅರಿತರೆ ಒಳ್ಳೆಯದು. ಈ ಯೋಜನೆಗಳು ಅರ್ಹರಿಗೆ ನೇರವಾಗಿ ತಲುಪುವುದರಿಂದ ಹಾಗೂ ಬವಣೆಗಳ ಭಾರದಿಂದ ಏದುಸಿರು ಬಿಡುತ್ತಿರುವ ಬಡವರ ಬದುಕಿನಲ್ಲಿ ಪ್ರಾಣವಾಯುವಿನಂತೆ ಕೆಲಸ ಮಾಡುವುದೆಂಬ ಆಶಯದೊಂದಿಗೆ ಇವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದ ಅರ್ಥವ್ಯವಸ್ಥೆ 2022-23ರ ವರೆಗೆ ಕೈಗಾರಿಕಾ ವಲಯದಲ್ಲಿ ಶೇ. 3.86 ರಷ್ಟು ಬೆಳವಣಿಗೆ () ಹಾಗೂ ಸೇವಾ ವಲಯದಲ್ಲಿ ಶೇ. 4.25 ರಷ್ಟು ಬೆಳವಣಿಗೆ () ದಾಖಲಾಗಿದ್ದು, ಇದು ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿರುವುದನ್ನು ಎತ್ತಿ ತೋರಿಸುತ್ತದೆ. ರಾಜ್ಯದ ಹಣಕಾಸು ಪರಿಸ್ಥಿತಿ 15ನೇ ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ರಾಜ್ಯ ಕೇಂದ್ರಿತ ಕಾಮಗಾರಿಗಳ/ ಯೋಜನೆಗಳಿಗೆ ಅನುದಾನವನ್ನು ಶಿಫಾರಸ್ಸು ಮಾಡಿರುತ್ತದೆ. ನಮ್ಮ ರಾಜ್ಯಕ್ಕೆ 3,000 ಕೋಟಿ ರೂ.ಗಳ ಅನುದಾನವನ್ನು ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಮತ್ತು 3,000 ಕೋಟಿ ರೂ.ಗಳನ್ನು ಬೆಂಗಳೂರು ನಗರದ ಪೆರಿಫೆರಲ್ ರಿಂಗ್‌ ರಸ್ತೆಗಾಗಿ ಎಂದು ರಾಜ್ಯ-ಕೇಂದ್ರಿತ ಅನುದಾನವನ್ನು ಶಿಫಾರಸ್ಸು ಮಾಡಿರುತ್ತದೆ. ಆದರೆ, ಕೇಂದ್ರ ಸರ್ಕಾರವು ಈ ಅನುದಾನವನ್ನು ನಮ್ಮ ರಾಜ್ಯಕ್ಕೆ ನೀಡಿರುವುದಿಲ್ಲ. ಕೇಂದ್ರದ ವಿತ್ತ ಮಂತ್ರಿಯವರು ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿದ್ದರೂ, ನಮ್ಮದು ಡಬಲ್‌ ಇಂಜಿನ್‌ ಎಂದು ಹೇಳಿಕೊಳ್ಳುವ ಸರ್ಕಾರವಿದ್ದರೂ ಸಹ, ಕೇಂದ್ರದಿಂದ ಈ ಅನುದಾನವನ್ನು ಪಡೆಯುವಲ್ಲಿ ಹಿಂದಿನ ಸರ್ಕಾರವು ಅಸಮರ್ಥವಾಗಿರುತ್ತದೆ. ಕೃಷಿ.. ಎತ್ತೆಮ್ಮೆ ಹೂಡುವುದು| ಉತ್ತೊಮ್ಮೆ ಹರಗುವುದು| ಬಿತ್ತೊಮ್ಮೆ ಹರಗಿ, ಕಳೆತೆಗೆದರಾ ಬೆಳೆಯು| ಎತ್ತುಗೈಯುದ್ದ ಸರ್ವಜ್ಞ|| ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ ಒದಗಿಸಲಾಗುವುದು. 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು. ತೋಟಗಾರಿಕೆ ರೇಷ್ಮೆ ಪಶುಸಂಗೋಪನೆ ಮೀನುಗಾರಿಕೆ ಸಹಕಾರ ಜಲಸಂಪನ್ಮೂಲ ರೂ. ಗಳನ್ನು ಒದಗಿಸುವ ಅವಶ್ಯಕತೆಯಿದೆ. ಈ ಯೋಜನೆಗಳ ವೆಚ್ಚವು ಕಾಮಗಾರಿ ಹಾಗೂ ಭೂಸ್ವಾಧೀನ ವೆಚ್ಚ ಹೆಚ್ಚಳದ ಕಾರಣ 25,000 – 40,000 ಕೋಟಿ ರೂ. ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದಲ್ಲದೇ ಕಳೆದ 6 ತಿಂಗಳ ಅವಧಿಯಲ್ಲಿ 25,548 ಕೋಟಿ ರೂ. ಅಂದಾಜು ವೆಚ್ಚದ 1,274 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲನೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆಯವ್ಯಯ ಹಂಚಿಕೆ ವಾರ್ಷಿಕ ಸರಾಸರಿ 20,000 ಕೋಟಿ ರೂ. ಗಳಷ್ಟಿದ್ದು, ಅನುಮೋದಿಸಿರುವ ಯೋಜನೆಗಳ ಅಂದಾಜು ಮೊತ್ತ ಇದರ ಐದು ಪಟ್ಟು ಹೆಚ್ಚಾಗಿರುವುದು ವಿತ್ತೀಯ ಶಿಸ್ತಿನ ಉಲ್ಲಂಘನೆಗೆ ಸ್ಪಷ್ಟ ನಿದರ್ಶನವಾಗಿದೆ. ಅಲ್ಲದೆ ಕಳೆದ ಆರು ತಿಂಗಳ ಅವಧಿಯಲ್ಲಿಯೇ ಇಲಾಖೆಯ ವಾರ್ಷಿಕ ಆಯವ್ಯಯ ಹಂಚಿಕೆಗಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲನೆ ನೀಡಿರುವುದು ವಿತ್ತೀಯ ಅಶಿಸ್ತಿನ ಪರಮಾವಧಿಯಲ್ಲದೆ ಇನ್ನೇನು? ಹಿಂದಿನ ಸರ್ಕಾರದ ಈ ವಿವೇಚನಾ ರಹಿತ ಕ್ರಮಗಳಿಂದಾಗಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲದಂತಾಗಿದೆ. ಸಣ್ಣ ನೀರಾವರಿ ಕೆ.ಸಿ. ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆಗಳಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಯೋಜನೆಯ ಮೂಲಕ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿ ಈ ಜಿಲ್ಲೆಗಳ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡು ರೈತರು ಸಂತಸಗೊಂಡಿದ್ದಾರೆ. ಪ್ರಸ್ತುತ ಎರಡನೇ ಹಂತದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 296 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 529 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ʻಶಿಕ್ಷಣವು ವಿಮೋಚನಾ ಶಕ್ತಿಯಾಗಿದೆ ಮತ್ತು ನಮ್ಮ ಕಾಲದಲ್ಲಿ ಜನತಂತ್ರವನ್ನು ಸ್ಥಾಪಿಸುವ ಶಕ್ತಿಯೂ ಆಗಿದೆ; ಶಿಕ್ಷಣವು ಜಾತಿ ಮತ್ತು ವರ್ಗದ ನಿರ್ಬಂಧಗಳನ್ನು ತೊಲಗಿಸಿ, ಹುಟ್ಟಿನಿಂದ ಅಥವಾ ಇನ್ನಾವುದೇ ಪರಿಸ್ಥಿತಿಯಿಂದ ಉದ್ಭವಿಸಿದ ಅಸಮಾನತೆಗಳನ್ನು ನಿವಾರಿಸುತ್ತದೆʼ. – ಶ್ರೀಮತಿ ಇಂದಿರಾ ಗಾಂಧಿ 45,000 ರೂ. ಗಳವರೆಗೆ ಹೆಚ್ಚಿಸಿ 4೭,2೭೨ ಶಾಲೆಗಳು ಹಾಗೂ 1,231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನ ಒದಗಿಸಲಾಗುವುದು. 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಉನ್ನತ ಶಿಕ್ಷಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು. : – -