ಬೆಂಗಳೂರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಸಿದ್ಧರಾಮಯ್ಯ: 45 ಸಾವಿರ ಕೋಟಿ ರೂ. ಅನುದಾನ ಘೋಷಣೆ. ಬೆಂಗಳೂರು,ಜುಲೈ,7,2023(..):ರಾಜ್ಯ ರಾಜಧಾನಿ ಬೆಂಗಳೂರಿಗೆ ಸಿಎಂ ಸಿದ‍್ಧರಾಮಯ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಿದ್ದಾರೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ಧರಾಮಯ್ಯ, ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದಿದ್ದಾರೆ. ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಗುರಿ ಹೊಂದಲಾಗಿದ್ದು . ಸರ್.‌ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಬಳಿ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. : – - 45 - - -.