ವಿಧಾನಸಭೆಯಲ್ಲಿ ಭದ್ರತಾ ಲೋಪ…? ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅಪರಿಚಿತ ವ್ಯಕ್ತಿ. ಬೆಂಗಳೂರು,ಜುಲೈ7,2023(..):ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡನೆ ವೇಳೆ ಭದ್ರತಾ ಲೋಪವಾಗಿರುವ ಆರೋಪ ಕೇಳಿ ಬಂದಿದೆ. ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸುತ್ತಿದ್ದ ವೇಳೆ ಶಾಸಕರಲ್ಲದ ವ್ಯಕ್ತಿಯೋಬ್ಬ ವಿಧಾನಸಭೆ ಪ್ರವೇಶಿಸಿ ಶಾಸಕರ ಆಸನದಲ್ಲಿ ಕುಳಿತ ಘಟನೆ ನಡೆದಿದೆ. ಬಜೆಟ್​ ಮಂಡನೆ ವೇಳೆ ಸಮಾರು 15 ನಿಮಿಷಗಳ ಕಾಲ ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದಾನೆ. ಇದನ್ನು ಗಮನಿಸಿದ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಕೂಡಲೇ ಅವರು ಎದ್ದು ಹೋಗಿ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಆದ್ರೆ, ಅಷ್ಟರೊಳಗೆ ಆ ಅನಾಮಿಕ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದು, ಇದರಿಂದ ಆ ವ್ಯಕ್ತಿ ಯಾರು? ಏಕೆ ಬಂದಿದ್ದ? ಇಷ್ಟೊಂದು ಭದ್ರತೆ ನಡುವೆಯೂ ಆ ವ್ಯಕ್ತಿ ಹೇಗೆ ಸದನದೊಳಗೆ ಪ್ರವೇಶಿಸಿದ್ದನು ಎಂಬ ಪ್ರಶ್ನೆ ಉದ್ಬವಿಸಿದೆ. : - – - – -