ತಾಕತ್ ಇದ್ರೆ ಪೆನ್ ಡ್ರೈವ್ ನಲ್ಲಿ ಏನಿದೆ ಎಂದು ಹೆಚ್.ಡಿಕೆ ಬಹಿರಂಗಪಡಿಸಲಿ – ಮಾಜಿ ಸಿಎಂ ವೀರಪ್ಪ ಮೊಯ್ಲಿ ಸವಾಲು. ಚಿಕ್ಕಬಳ್ಳಾಪುರ,ಜುಲೈ,6,2023(..):ಸರ್ಕಾರದ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿ ತಮ್ಮ ಬಳಿ ಸಾಕ್ಷಿ ಇದೆ ಎಂದು ಪೆನ್ ಡ್ರೈವ್ ಪ್ರದರ್ಶಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸವಾಲು ಹಾಕಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹೆಚ್.ಡಿ. ಕುಮಾರಸ್ವಾಮಿಗೆ ಧಮ್, ತಾಕತ್ತು ಇದ್ರೆ ಪೆನ್ ಡ್ರೈವ್ ​ನಲ್ಲಿ ಏನಿದೆ ಎಂದು ಬಹಿರಂಗ ಪಡಿಸಲಿ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತು ಹೆಚ್ ​ಡಿಕೆ ಹತಾಶರಾಗಿದ್ದಾರೆ. ಅವರು ಸಿಎಂ ಆಗಿದ್ದಾಗಿನ ದಾಖಲೆ ಪೆನ್ ಡ್ರೈವ್ ​ನಲ್ಲಿ ಇರಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಲ್ಲ. ತಪ್ಪಿನಲ್ಲಿ ಸಿಲುಕಿಸಲು ಬಿಜೆಪಿ ಜೆಡಿಎಸ್ ಯತ್ನಿಸುತ್ತಿದೆ. ಅವರ ಕನಸ್ಸು ಹಿಡೇರಲ್ಲ ಎಂದು ಕುಟಕಿದರು. : - - -