ಬಿಜೆಪಿಯದ್ದು ಪಶ್ಚಾತ್ತಾಪದ ಪ್ರತಿಭಟನೆ-ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ. ​​​ ಬೆಂಗಳೂರು,ಜುಲೈ,5,2023(..):ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ಬಿಜೆಪಿ ನಾಯಕರು ಸದನದ ಒಳಗೆ ಮತ್ತು ಹೊರಗೆ ನಡೆಸಿದ ಪ್ರತಿಭಟನೆ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಈ ಕುರಿತು ಸದನದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿ ಪ್ರತಿಭಟನೆ ಪಶ್ಚಾತ್ತಾಪದ ಪ್ರತಿಭಟನೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸಿ. ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಧರಣಿ ನಡೆಸಲಿ ಎಂದು ಹೇಳಿದರು. ತೈಲ ಬೆಲೆ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್ ದರ ಇಳಿಸಿಲ್ಲ. ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸದಿದ್ದರಿಂದ ಬೆಲೆ ಏರಿಕೆಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು. : - ---