ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ಮಾಜಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ: ಹಲವು ನಾಯಕರು ಸಾಥ್. ಬೆಂಗಳೂರು,ಜುಲೈ ,4,2023(..):ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಸಿಡಿದೆದ್ದಿದ್ದು ಇಂದು ವಿಧಾನಮಂಡಲ ಅಧಿವೇಶನದ ಒಳಗೆ ಮತ್ತು ಹೊರಗೂ ಪ್ರತಿಭಟನೆ ನಡೆಸಿದೆ. ಸದನದೊಳಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆದರೇ ಇತ್ತ ನಗರದ ಫ್ರೀಡಂ ಪಾರ್ಕ್​​ನಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​, ಮಾಜಿ ಸಿಎಂ ಡಿವಿ ಸದಾನಂದಗೌಡ​, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ.ನಾಗೇಶ್, .ಮಹೇಶ್​, ಮಾಜಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್​​.ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕಿ ಗ್ಯಾರಂಟಿ ಯೋಜನೆ ಜಾರಿ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. : - – - –