ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೆಚ್.ಡಿಕೆ ಗಂಭೀರ ಆರೋಪಕ್ಕೆ ಧ್ವನಿಗೂಡಿಸಿದ ಮಾಜಿ ಸಿಎಂ ಬೊಮ್ಮಾಯಿ. ಬೆಂಗಳೂರು,ಜುಲೈ,3,2023(..):ಸಿಎಂ ಕಚೇರಿಯಲ್ಲಿ ಶಾಸಕರು ಶಿಫಾರಸು ಪತ್ರ ತಂದರೆ 30 ಲಕ್ಷ ದುಡು ತನ್ನಿ ಅಂತಾರೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಧ್ವನಿಗೂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯಪಾಲರ ಭಾಷಣ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ರಾಜ್ಯಪಾಲರ ಭಾಷಣ ನಾನು ಕಂಡಂತೆ ಸಪ್ಪೆ ಭಾಷಣ. ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿರುವ ಸರ್ಕಾರ. ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭೀತಾಗಿದೆ ಎಂದು ಟೀಕಿಸಿದರು. : - - –- - - –