ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ. ಬೆಂಗಳೂರು,ಜುಲೈ,,4,2023(..):ತಾಂತ್ರಿಕ ಸಮಸ್ಯೆಯಿಂದಾಗಿ ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋಸಂಚಾರ ಸ್ಥಗಿತವಾದ ಹಿನ್ನೆಲೆ, ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ನೇರಳೆ ಮಾರ್ಗದ ಕೆಂಗೇರಿ -ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ. ಹೆಚ್ಚು ಜನ ಸಂಚರಿಸುವ ಅವಧಿಯಲ್ಲೇ ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರು ಪರದಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತಗೊಳಿಸಲಾಗಿತ್ತು. ಜೂನ್ 30ರಂದು ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಸುವುದಿಲ್ಲ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು. : - – – -