ಕಾಂಗ್ರೆಸ್ ಸರ್ಕಾರದಿಂದ ವರ್ಗಾವಣೆ ದಂಧೆ, ಪೇಮೆಂಟ್ ಸರ್ವೀಸ್ ಶುರು- ಮಾಜಿ ಸಚಿವ ಅಶ್ವಥ್ ನಾರಾಯಣ್. ಬೆಂಗಳೂರು,ಜುಲೈ,3,2023(..):ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವರ್ಗಾವಣೆ ದಂಧೆ, ಪೇಮೆಂಟ್ ಸರ್ವೀಸ್ ಶುರುವಾಗಿದೆ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಆರೋಪಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವಥ್ ನಾರಾಯಣ್, ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್​ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ನಾಯಕರು ವರ್ಗಾವಣೆ ದಂಧೆ ಶುರು ಮಾಡಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಜನ ಆಧಾರಿತ ಅಂತಾ ಇತ್ತು.ಆದರೆ ಇದು ನಾಯಕರ ಆಧಾರಿತ ಸರ್ಕಾರವಿದು ಎಂದು ಟೀಕಿಸಿದರು. : –- - – - .